March 13, 2026

ಸುರತ್ಕಲ್: ಕುಲಾಯಿ ಪ್ರದೇಶದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

0
image_editor_output_image1276873127-1688534364163.jpg

ಸುರತ್ಕಲ್: ಮಂಗಳವಾರ ನಡುರಾತ್ರಿ ಸಮುದ್ರ ತೀರದಲ್ಲಿ ಭಾರಿ ಸುಂಟರಗಾಳಿಗೆ ಕುಲಾಯಿ ಪ್ರದೇಶದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಇತ್ತ ಸಮೀಪದಲ್ಲಿ ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಗೆಲ್ಲೊಂದು ಬಿದ್ದು ಹಾನಿ ಸಂಭವಿಸಿದೆ.

ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಒಂದು ಭಾಗ ಸಿಲುಕಿಕೊಂಡ ಪರಿಣಾಮ ಭಾರಿ ಜೀವ ಹಾನಿ ತಪ್ಪಿದೆ.

Leave a Reply

Your email address will not be published. Required fields are marked *

error: Content is protected !!