November 22, 2024

‘ಒಮೈಕ್ರಾನ್’ ರೂಪಾಂತರಿ ಕೊರೋನಾ ವೈರಸ್ ಬಗ್ಗೆ ಎಚ್ಚರವಾಗಿರಿ: ಆರೋಗ್ಯ ಸಚಿವ ಡಾ. ಕೆ ಸುಧಾಕರ್

0

ಬೆಂಗಳೂರು: ಕಳೆದೊಂದು ವಾರದಿಂದ B.1.1.529 ಒಮೈಕ್ರಾನ್ ಎಂಬ ರೂಪಾಂತರಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. ಒಮೈಕ್ರಾನ್ ಇಡೀ ಸಮುದಾಯಕ್ಕೆ ಬಂದಾಗ ವೇಗವಾಗಿ ಹರಡಬಹುದು ಎಂಬ ಮಾಹಿತಿಯಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ರೂಪಾಂತರಿ ಕೊವಿಡ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಈ ಬಗ್ಗೆ ಮಾಹಿತಿ ನೀಡಿದೆ. ಹೊಸ ವೈರಸ್ ಬಗ್ಗೆ ಜನರು ಆತಂಕಪಡದೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ನಿನ್ನೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ರೂಪಾಂತರಿ ವೈರಸ್ ಇರುವ ದೇಶದಿಂದ ಬರುವ ನಾಗರಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲಾಗುವುದು ಎಂದರು.

ಕೋವಿಡ್ ಟೆಸ್ಟ್ ಮಾಡಿಸಿದ ನಂತರ ಪಾಸಿಟಿವ್ ಬಂದವರನ್ನು ಪ್ರತ್ಯೇಕವಾಗಿ ಇರಿಸಲಾಗುವುದು. ಏಳು ದಿನಗಳ ನಂತರ ಮತ್ತೆ ಟೆಸ್ಟ್ ಮಾಡಿ ನೆಗೆಟಿವ್ ಇದೆಯೇ ಎಂದು ಖಚಿತಪಡಿಸುತ್ತೇವೆ ಎಂದು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

ದಕ್ಷಿಣ ಆಫ್ರಿಕಾ, ಬೊಟ್ಸ್ವಾನಾ, ಹಾಂಕಾಂಗ್, ಇಸ್ರೇಲ್ ಹೀಗೆ ನಾಲ್ಕೈದು ದೇಶಗಳಲ್ಲಿ ಕೊರೋನಾ ರೂಪಾಂತರಿ ಕಾಣಿಸಿಕೊಂಡಿದೆ. ಕಳೆದ 9 ತಿಂಗಳಿನಿಂದ ಡೆಲ್ಟಾ ರೂಪಾಂತರಿ ಆಲ್ಪಾ, ಬೀಟಾ, ಗಾಮಾ, ಕಾಫಾ ಎಲ್ಲದಕ್ಕೂ ಮೀರಿ ಅದೊಂದೇ ಇಡೀ ವಿಶ್ವದಲ್ಲಿ ಹರಡಿತ್ತು. 9 ತಿಂಗಳಿನಿಂದ ಡೆಲ್ಟಾ ರೂಪಾಂತರಿಗಿಂತ ತೀವ್ರವಾದ ವೈರಸ್ ಹರಡಿ ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿರಲಿಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!