ಹೆದ್ದಾರಿಯ ಗುಡ್ಡ ಕುಸಿದು ಕಾರಿನ ಮೇಲೆ ಉರುಳಿ ಬಿದ್ದ ಬಂಡೆಕಲ್ಲು: ಕಾರಿನಲ್ಲಿದ್ದ ಇಬ್ಬರು ಮೃತ್ಯು
ನಾಗಾಲ್ಯಾಂಡ್: ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಬೃಹತ್ ಬಂಡೆಯೊಂದು ಕಾರಿನ ಮೇಲೆ ಉರುಳಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ನಾಗಾಲ್ಯಾಂಡ್ ನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ(ಜು.4 ರಂದು) ನಡೆದಿದೆ.
ಕಳೆದ ಕೆಲ ದಿನಗಳಿಂದ ಈಶಾನ್ಯ ಭಾರತದಲ್ಲಿ ಭಾರೀ ಮಳೆ ಸುರಿಯುತ್ತಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.
ಇದರಿಂದ ಕೆಲ ಸಮಯ ವಾಹನಗಳು ಚುಮೌಕೆಡಿಮಾದ ಪೊಲೀಸ್ ಚೆಕ್‌ಪೋಸ್ಟ್ ಬಳಿ ನಿಂತಿದೆ. ಈ ವೇಳೆ ಏಕಾಏಕಿ ಬೃಹತ್ ಬಂಡೆಯೊಂದು ಕಾರಿನ ಮೇಲೆಯ ಉರುಳಿ ಬಿದ್ದಿದೆ.
ಪರಿಣಾಮ ಮೂರು ಕಾರುಗಳು ಪಲ್ಟಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.




