ವಿಟ್ಲ ಪೊಲೀಸ್ ಠಾಣೆಯ ಎಸ್ಸೈ ರುಕ್ಮ ನಾಯ್ಕ್ ವರ್ಗಾವಣೆ
ವಿಟ್ಲ: ದ.ಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಎಸ್.ಐ ಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದು, ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ಅವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿ ಸುಳ್ಯದ ರತ್ನ ಕುಮಾರ್ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದಾರೆ.




