February 4, 2026

ಮಂಗಳೂರು | ಭಾರೀ ಗಾಳಿ ಮಳೆಗೆ ಮುರಿದುಬಿದ್ದ ಹೋರ್ಡಿಂಗ್: ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿ

0
image_editor_output_image-526968523-1688545287346.jpg

ಮಂಗಳೂರು: ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು, ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಜು.೫ ರ ಬುಧವಾರ ಬಿಕರ್ನಕಟ್ಟೆಯಲ್ಲಿ ಘಟನೆ ನಡೆದಿದೆ.

ಘಟನೆಯಲ್ಲಿ ಕೆಲವು ಅಂಗಡಿಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹೋರ್ಡಿಂಗ್ ತೆರವುಗೊಳಿಸಿದರು. ಘಟನೆಯಿಂದ ನಂತೂರು-ಪಡೀಲ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಅದೃಷ್ಟವಶಾತ್, ಹೋರ್ಡಿಂಗ್ ಮುರಿದು ಬಿದ್ದಾಗ ಕೆಳಗೆ ಯಾರೂ ಇಲ್ಲದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!