March 13, 2026

ವಿಟ್ಲ: ಭಾರೀ ಗಾಳಿ ಮಳೆ: ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಬಿದ್ದ ಮರ: ವಾಹನ ಸಂಪೂರ್ಣ ಜಖಂ

0
IMG-20230705-WA0021.jpg

ವಿಟ್ಲ: ಭಾರೀ ಮಳೆಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ವಾಹನ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿದೆ.‌

ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಬೃಹತಾಕಾರದ ಮಾವಿನ ಮರ ಅದರ ಮೇಲೆ ಉರುಳಿ ಬಿದ್ದಿದೆ.‌ ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!