ವಿಟ್ಲ: ಭಾರೀ ಗಾಳಿ ಮಳೆ: ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಬಿದ್ದ ಮರ: ವಾಹನ ಸಂಪೂರ್ಣ ಜಖಂ
ವಿಟ್ಲ: ಭಾರೀ ಮಳೆಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ವಾಹನ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿದೆ.

ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಬೃಹತಾಕಾರದ ಮಾವಿನ ಮರ ಅದರ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.




