March 24, 2026

ದ.ಕ ಜಿಲ್ಲೆ ನಾಳೆ(ಜುಲೈ 6) ಶಾಲಾ ಕಾಲೇಜ್ ಗಳಿಗೆ ರಜೆ ಘೋಷಣೆ

0
image_editor_output_image807189515-1688437509717

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!