February 4, 2026

ಪುತ್ತೂರು: ಕನ್ನಡ್ಕದಲ್ಲಿ ಗುಡ್ಡ ಜರಿದು ಮನೆಗೆ ಹಾನಿ: ಮನೆಯಲ್ಲಿದ್ದವರು ಅಪಾಯದಿಂದ ಪಾರು

0
IMG-20230706-WA0052.jpg

ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕನ್ನಡ್ಕ ಎಂಬಲ್ಲಿ ಗುಡ್ಡ ಜರಿದು ಮನೆಗೆ ಹಾನಿ ಸಂಭವಿಸಿದ್ದು ಮನೆಯಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ಜು.6ರ ಗುರುವಾರ ನಡೆದಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗುಡ್ಡ ಜರಿದು ರಾಘವ ಗೌಡ ಎಂಬವರ ಮನೆಯ ಹಿಂಭಾಗಕ್ಕೆ ಗುಡ್ಡ ಬಿದ್ದು ಗೋಡೆ ಹಾಗೂ ಮೇಲ್ಚಾವಣಿಗೆ ಹಾನಿ ಸಂಭವಿಸಿದೆ.

ಇನ್ನು ಮನೆಯಲ್ಲಿದ್ದ ರಾಘವ ಗೌಡ, ಪತ್ನಿ, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಕಂದಾಯ ಅಧಿಕಾರಿ ಮಂಜುನಾಥ್, ಸಹಾಯಕ ರಘುನಾಥ್ ಸ್ಥಳೀಯರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!