February 4, 2026

ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ: ನಾಳೆ ಜುಲೈ 7ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

0
IMG-20230706-WA0044.jpg

ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 7ರ ಶುಕ್ರವಾರದಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ, ಬುಧವಾರ, ಗುರುವಾರವೂ ದಿನವಿಡೀ ಮಳೆ ಸುರಿದಿದೆ. ಶುಕ್ರವಾರವೂ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!