July 10, 2026

ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಮೃತ್ಯು: ಯುವತಿಯ ರಕ್ಷಣೆ

0
image_editor_output_image-744982306-1688703745190

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ.
ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(೪೯) ಹಾಗೂ ಶಫಾ(೨೦) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಅವರಲ್ಲಿ ಸಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.
ಉಳಿದಂತೆ ಝರಿನಾ ಅವರು ಮೃತಪಟ್ಟಿದ್ದಾರೆ. ಕೆಲವು ಗಂಟೆಗಳ ಕಾಲ ರಕ್ಷಣಾ ಕಾರ್ಯ ದಲ್ಲಿ ಸ್ಥಳೀಯರು ತೊಡಗಿದ್ದರು. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳದಲ್ಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!