ಪ್ರೀತಿಸಿದ ಯುವಕನೊಂದಿಗೆ ಮಗಳು ಪರಾರಿ: ತಾಯಿ ನೇಣು ಬಿಗಿದು ಆತ್ಮಹತ್ಯೆ
ಗದಗ: ಪ್ರೀತಿಸಿದ ಯುವಕನೊಂದಿಗೆ ಮಗಳು ಮನೆ ತೊರೆದು ಹೋಗಿದ್ದಕ್ಕೆ ಬೇಸತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೋಳದಲ್ಲಿ ನಡೆದಿದೆ.
ಗ್ರಾಮದ ಅಂಗನವಾಡಿ ಶಿಕ್ಷಕಿಯಾಗಿದ್ದ ಸುನೀತಾ ವೀರಣ್ಣ ನಾಯಕವಾಡಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಳೆದ ಅನೇಕ ತಿಂಗಳಿಂದ ಅದೇ ಊರಿನ ಯುವಕನೊಬ್ಬನನ್ನು ಮಗಳು ಪ್ರೀತಿಸುತ್ತಿದ್ದಳು. ಯುವಕ ಅನ್ಯ ಜಾತಿಯವನು ಎಂಬ ಕಾರಣಕ್ಕೆ ಸುನಿತಾ ಮಗಳ ನಿರ್ಧಾರವನ್ನು ಒಪ್ಪಿರಲಿಲ್ಲ.
ಇತ್ತೀಚೆಗೆ ಯುವತಿ ಪ್ರೀತಿಸುತ್ತಿದ್ದ ಯುವಕನೊಂದಿಗೆ ಮದುವೆಯಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಇದರಿಂದ ಬೇಸರಕ್ಕೊಳಗಾಗಿದ್ದ ಸುನೀತಾ ಅದೇ ಕೊರಗಿನಲ್ಲಿದ್ದರು ಎನ್ನಲಾಗಿದೆ. ಇದೀಗ ಸಹೋದರಿಯ ಮನೆಯಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.




