September 20, 2024

ರಾಜ್ಯ ಬಜೆಟ್ ನಲ್ಲಿ ಕರಾವಳಿ ಭಾಗದ ಮೀನುಗಾರರಿಗೆ ಬಂಪರ್ ಕೊಡುಗೆ

0

ಮೀನುಗಾರಿಕೆ: ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತವಾಗಿ ನೀಡುವ ಸಾಲ 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಳ

ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ.

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.

Leave a Reply

Your email address will not be published. Required fields are marked *

error: Content is protected !!