ವಿಟ್ಲ: ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ನೇಣು ಬಿಗಿದು ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತರು.
ಕೌಟುಂಬಿಕ ಕಿರಿಕಿರಿ ಹಿನ್ನೆಲೆ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈತ ಡೆತ್ ನೋಟು ಬರೆದು ಈ ಕೃತ್ಯ ಎಸೆಗಿದ್ದು, ನನ್ನ ಸಾವಿಗೆ ಕೌಟುಂಬಿಕ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.




