March 15, 2026

ಮಂಗಳೂರು: ಪಿಂಚಣಿ ದಾಖಲೆ ನೀಡಲು 5 ಲಕ್ಷ ರೂ. ಲಂಚ ಸ್ವೀಕಾರ: ಲೋಕಯುಕ್ತ ಬಲೆಗೆ ಬಿದ್ದ ಶಾಲೆ ಸಂಚಾಲಕಿ

0
image_editor_output_image935292628-1688744754365.jpg

ಮಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರು ಪೆನ್ಷನ್‌ ಹಣವನ್ನು ಪಡೆಯಲು ಶಾಲೆಗಳಿಂದ ಅಗತ್ಯ ದಾಖಲೆಗಳನ್ನು ಒದಗಿಸಲು ಶಾಲಾ ಸಂಚಾಲಕಿ ಬರೋಬ್ಬರಿ 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸಂಚಾಲಕಿಯನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿಯಲಾಗಿದೆ.

ಮಂಗಳೂರು ಹೊರವಲುದ ಬಜ್ಪೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಪೂಜಾರಿ ರೆಡ್ ಹ್ಯಾಂಡ್ ಆಗಿ ಸೆರೆಯಾದವರಾಗಿದ್ದಾರೆ. ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾರಾಣಿರವರು ದಿನಾಂಕ 31.07.2023 ರಂದು ವಯೋನಿವೃತ್ತಿ ಹೊಂದಲಿದ್ದು, ತನ್ನ ವಯೋ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ದಿನಾಂಕ 25.05.2023 ರಂದು ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್‌ಮೆಂಟ್‌ ಸಂಚಾಲಕರಾದ ಶ್ರೀಮತಿ ಜ್ಯೋತಿ ಎನ್ ಪೂಜಾರಿರವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಂಚಾಲಕರಾದ ಶ್ರೀಮತಿ ಜ್ಯೋತಿ.ಎನ್‌.ಪೂಜಾರಿರವರು ಸ್ವೀಕೃತಿಯನ್ನು ನಂತರ ನೀಡುವುದಾಗಿ ತಿಳಿಸಿ, ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಫಿರ್ಯಾದಿದಾರರಿಗೆ ಸತಾಯಿಸಿ, ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಾದರೆ ರೂ.20,00,000/- (ಇಪ್ಪತ್ತು ಲಕ್ಷ) ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು.

ಮತ್ತೆ ಜ್ಯೋತಿಯರನ್ನು ಭೇಟಿ ಮಾಡಿ ತನ್ನ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಿ ಕಳುಹಿಸಿಕೊಡುವಂತೆ ಕೋರಿಕೊಂಡರೂ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಬೇಕಾದರೆ, ರೂ 5,00,000/- (ಐದು ಲಕ್ಷ) ಕೊಡಬೇಕು ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಶೋಭಾ ರಾಣಿ ಅವರು ಮಂಗಳೂರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!