August 12, 2026

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಾಳೆ(ಜು.8) ಶಾಲೆ, ಕಾಲೇಜುಗಳಿಗೆ ರಜೆಯಿಲ್ಲ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

0
IMG-20230706-WA0044.jpg

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯ ಕಾರಣ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದು, ಆದರೆ, ಶನಿವಾರದಂದು ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. 

ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿತ್ತು. ಆದರೆ, ಇದೀಗ ಶುಕ್ರವಾರ ಮಳೆ ಇಳಿಕೆಯಾದ ಹಿನ್ನೆಲೆ ಶನಿವಾರದಂದು ರಜೆ ನೀಡಲಾಗಿಲ್ಲ. ಸೂಕ್ತವಾದ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡು ಹಾಗೂ ಮುಂಜಾಗರೂಕತೆಯ ಜೊತೆಗೆ ಶಾಲೆ ಕಾಲೇಜುಗಳನ್ನು ನಡೆಸುವಂತೆ ದ.ಕ. ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅಪಾಯಕಾರಿ ಸನ್ನಿವೇಶವಿದ್ದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡುವಂತೆಯೂ ಮನವಿ ಮಾಡಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!