August 12, 2026

ಕಡೂರು: KSRTC ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಯುವಕರು

0
image_editor_output_image2103451415-1688794764425.jpg

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಯುವಕರು ಕೆಎಸ್ಆರ್ಟಿಸಿ ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.

ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಬಸ್ಸಿನ ಮೇಲೆ ಎಸೆದಿದ್ದಾರೆ.

ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು ಕೆಎಸ್ಆರ್ಟಿಸಿ ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!