ಬಾಲಕಿಯ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಚಾಮರಾಜನಗರ: ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯ ತೀರ್ಪು ನೀಡಿದೆ.
ಚಾಮರಾಜನಗರ ತಾಲೂಕಿನ ಗ್ರಾಮವೊಂದರ ಯುವಕ ರಂಗಸ್ವಾಮಿ (21) ಶಿಕ್ಷೆಗೊಳಗಾದ ಅಪರಾಧಿ. ದೊಡ್ಡಪ್ಪನ ಮಗಳಾದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಈತ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದನು.




