March 13, 2026

ಜೈನಮುನಿಯ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

0
IMG-20230708-WA0033.jpg

ಬೆಳಗಾವಿ,: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನ‌ಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಬೆಳಕಿಗೆ ಬಂದಿದ್ದು, ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ.

ಸೀರೆ, ಟವೆಲ್ ಸೇರಿ ಇತರೆ ಬಟ್ಟೆಗಳಿಂದ ಸುತ್ತಿ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಕತ್ತರಿಸಿ ಎಸೆಯಲಾಗಿದ್ದು, ಈವರೆಗೆ ಮೃತದೇಹದ ಒಟ್ಟು ಐದು ಭಾಗಗಳನ್ನು ವೈದ್ಯಕೀಯ ಸಿಬ್ಬಂದಿ ಹೊರತೆಗೆದಿದ್ದಾರೆ.

ಇನ್ನು ಬೆಳಗ್ಗೆ 6 ಗಂಟೆಯಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ ಸಿಬ್ಬಂದಿಗಳು ಸತತ ಒಂಬತ್ತು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಜೈನಮುನಿ ಮೃತದೇಹ ಪತ್ತೆ ಮಾಡಿದ್ದಾರೆ.
ಮೃತದೇಹ ಪತ್ತೆಯಾದ ಬೆನ್ನಲ್ಲೇ ಪೊಲೀಸರು ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!