September 27, 2026

ಕಾಸರಗೋಡು: ಆಟೋರಿಕ್ಷಾ ಪಲ್ಟಿ: ಗಂಭೀರ ಗಾಯಗೊಂಡು ಚಾಲಕ ಮೃತ್ಯು

0
IMG-20230709-WA0015.jpg

ಕಾಸರಗೋಡು: ಆಟೋರಿಕ್ಷಾ ಮಗುಚಿ ಆಟೋ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೆರ್ಮುದೆ ಬಳಿ ನಡೆದಿದೆ.

ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತ ಪಟ್ಟವರು.

 

ಮೃತರು ಚೇವಾರ್ ನಲ್ಲಿ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾಡಿಗೆಗೆ ತೆರಳಿ ಮರಳುತ್ತಿದ್ದಾಗ ರಸ್ತೆ ಬದಿ ಇಡಲಾಗಿದ್ದ ಇಂಟರ್ ಲಾಕ್ ಗೆ ಬಡಿದು ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದಡಿ ಸಿಲುಕಿದ್ದ ಕಿಶೋರ್ ನನ್ನು ನಾಗರಿಕರು ಬಂದ್ಯೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಈ ಬಗ್ಗೆ ಕುಂಬಳೆ ಪೊಲೀಸ ರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!