September 27, 2026

ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ: ಸವಾರ ಮೃತ್ಯು

0
IMG-20230709-WA0025.jpg

ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿಯಾಗಿ, ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಊರುವಲು ಗ್ರಾಮದ ಕುಪ್ಪೆಟ್ಟಿ ರಸ್ತೆ ಮಜ್ಜೆ ಎಂಬಲ್ಲಿ ನಡೆದಿದೆ.

ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!