March 13, 2026

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

0
image_editor_output_image2115567628-1688967324091.jpg

ಮೈಸೂರು: ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ವೇಣುಗೋಪಾಲ್‌ನ ಹತ್ಯೆ ನಡೆಸಿದ್ದಾರೆ.

ಟಿ. ನರಸೀಪುರ ಪಟ್ಟಣದ ಶ್ರೀರಾಂಪುರ ಕಲೋನಿಯ ನಿವಾಸಿಯಾಗಿದ್ದ ವೇಣುಗೋಪಾಲ್ ಯುವಬ್ರಿಗೇಡ್‌ನ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!