ಹಾಸನ: ಶಾಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ:
ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ
ಹಾಸನ: ಜಿಲ್ಲೆಯ ಕಸ್ತೂರಿ ಬಾ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಪ್ಪಲಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಚಪ್ಪಲಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಂಗಡಿ ಸಂಪೂರ್ಣ ಹೊತ್ತಿ ಉರಿದಿದೆ.
ಬೆಂಕಿ ಹತೋಟಿಗೆ ಬಾರದ ಕಾರಣ ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





