March 13, 2026

ಕಳ್ಳತನದ ಆರೋಪ: ವ್ಯಕ್ತಿಯನ್ನು ಬೆತ್ತಲೆ ಮಾಡಿ ಪೈಪ್‌ ನಿಂದ ಹಲ್ಲೆ

0
image_editor_output_image-1304099125-1688968506155.jpg

ಭೋಪಾಲ್:‌ ಕಳ್ಳತನ ಮಾಡಿದ್ದಾನೆ ಎನ್ನುವ ಆರೋಪದ ಮೇಲೆ ವ್ಯಕ್ತಿಯನ್ನು ಬೆತ್ತಲೆ ಮಾಡಿ, ಆತನ ಮೇಲೆ ಪೈಪ್‌ ನಿಂದ ಹಲ್ಲೆ ಮಾಡಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಳ್ಳತನ ಮಾಡಿದ್ದಾನೆ ಎಂದು ವ್ಯಕ್ತಿಯನ್ನು ಎಳೆದು ಆತನ ಬಟ್ಟೆಯನ್ನು ತೆಗೆದು, ಬೆತ್ತಲಾಗಿಸಿ ಗೋಡೆ ಒರಗಿ ಕೂರಿಸಿದ ಗುಂಪು ಆತನ ಮೇಲೆ ಅಮಾನವೀಯವಾಗಿ ದೌರ್ಜನ್ಯವೆಸಗಿದೆ.

ಪೈಪ್‌ ಗಳಿಂದ ಆತನ ಮೊಣಕೈ ಹಾಗೂ ದೇಹದ ಇತರ ಭಾಗಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಥಳಿತದ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ.

ಮೋತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಧರಮ್ ಕಾಂತಾ ಪ್ರದೇಶದಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!