March 13, 2026

ಸುಳ್ಯ| ಗರ್ಭಿಣಿಯಾದ ಬಾಲಕಿ: ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

0
image_editor_output_image-1997253762-1688969891395.jpg

ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಆ ದೂರಿನಂತೆ ಪೊಲೀಸರು ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ಬಳಿಕ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!