ಬಂಟ್ವಾಳ: ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ
ಬಂಟ್ವಾಳ: ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಟ ಮುಕ್ತ ದಿನ ದ ಪ್ರಯುಕ್ತ ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಅಡ್ಯನಡ್ಕ ಇದರ ಸಹಯೋಗದೊಂದಿಗೆ ಈ ದಿನ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ ವಿಶ್ವೇಶ್ವರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಹಿರಿಯ ತಾಲೂಕುಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಮತಿ ಕುಸುಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜನತಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀಮತಿ ವೀಣಾ ಟಿ ಇವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಆ ಪ್ರಯುಕ್ತ ಆರೋಗ್ಯ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.
ಕಾಲೇಜಿನ ಹಿಂದಿ ಉಪನ್ಯಾಸಕರಾದ ಶ್ರೀ ಸೋಮಶೇಖರ್
ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.
ಕನ್ನಡ ಉಪನ್ಯಾಸಕರಾದ ಶ್ರೀ ಶೀನಪ್ಪ ನಾಯ್ಕ ಕೆ ನಿರೂಪಿಸಿದ ಕಾರ್ಯಕ್ರಮ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ಇವರ ಧನ್ಯವಾದಗಳೊಂದಿಗೆ ಮುಕ್ತಾಯವಾಯಿತು.




