March 13, 2026

ಬೆಳ್ಮಣ್‌: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರು

0
IMG-20230710-WA0011.jpg

ಬೆಳ್ಮಣ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂರು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ನಡೆದಿದೆ.

ಭಾನುವಾರ ತಡರಾತ್ರಿ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!