March 13, 2026

ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದು ತಾಯಿ ಆತ್ಮಹತ್ಯೆ

0
image_editor_output_image1330840918-1689055177783.jpg

ಬೆಳಗಾವಿ: ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಹಾದೇವಿ ಇಂಚಲ (34) ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದವರು. ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮಹಾದೇವಿ ಇಂಚಲ ಅವರು ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದ ಯೋಧನನ್ನು ವರಿಸಿದ್ದರು.

ಏಳು ವರ್ಷಗಳ ಹಿಂದೆ ಪತಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮಹಾದೇವಿಯವರು ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ಪುತ್ರಿ ಜೊತೆಗೆ ವಾಸವಿದ್ದರು.

ಇದೀಗ ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತು ಪುತ್ರಿಯ ಜೊತೆಗೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!