March 13, 2026

ಉಳ್ಳಾಲ | ಭಾರೀ ಸಿಡಿಲಿಗೆ ಸುಟ್ಟುಹೋದ ಅಂಗಡಿ: ಲಕ್ಷಾಂತರ ರೂಪಾಯಿ ನಷ್ಟ

0
image_editor_output_image-723088314-1689060470810.jpg

ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ರಾಣಿಪುರದಲ್ಲಿ ಸಂಭವಿಸಿದ್ದು, ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ.ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ‌ ಸಂಭವಿಸಿದೆ.

ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ನಿದ್ರಿಸುತ್ತಿದ್ದರು.

ಅಂಗಡಿ‌ಗೆ ಬೆಂಕಿ ಬಿದ್ದಿರುವುದನ್ನು ಕಂಡು ದಾರಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಮನೆ ಮಂದಿಗೆ ತಿಳಿಸಿದ್ದಾರೆ.

ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.

ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟಿವೆ.

ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ,ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ

Leave a Reply

Your email address will not be published. Required fields are marked *

error: Content is protected !!