March 13, 2026

ಮಂಗಳೂರು: ‘ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ಒದಗಿಸಲು ಕೂಡಲೇ ಕ್ರಮವಹಿಸಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

0
IMG-20230706-WA0044.jpg

ಮಂಗಳೂರು: ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿ/ಮ್ಯಾನುಯಲ್ ಸ್ಕ್ಯಾವೆಂಜರ್‍ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಾದ ಪುರಸಭೆ ಹಾಗೂ ಪಟ್ಟಣ ಪಂಚಾಯತ್‍ಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸಮವಸ್ತ್ರ ಬದಲಾಯಿಸಲು, ಊಟ ಉಪಹಾರಕ್ಕೆ ಹಾಗೂ ವಿಶ್ರಾಂತಿಗಾಗಿ ಕೊಠಡಿ ಬೇಕು ಮುಖ್ಯವಾಗಿ ಅವರಿಗೆ ಕುಡಿಯುವ ನೀರು ಒದಗಿಸಬೇಕು ಇದಕ್ಕೆ ಶಾಶ್ವತವಾದ ವ್ಯವಸ್ಥೆಯನ್ನು ಮಾಡಬೇಕು, ಅದಕ್ಕೂ ಮುನ್ನ ತಾತ್ಕಾಲಿಕವಾಗಿ ಈ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅವರು ಸೂಚಿಸಿದರು.

ಪೌರ ಕಾರ್ಮಿಕರು ತಮ್ಮ ಕೆಲಸ ಮಾಡುವ ಸ್ಥಳದಲ್ಲೇ ಕೊಂಡೊಯ್ಯುವಲು ಅನುಕೂಲವಾಗುವಂತ ಉತ್ತಮ ಪೌಚ್ ಮಾದರಿಯ ನೀರಿನ ಬಾಟಲ್ ಗಳನ್ನು ವ್ಯವಸ್ಥೆ ಮಾಡಿಕೊಡುವಂತೆ ಅವರು ತಿಳಿಸಿದರು.

ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದ 371 ಹುದ್ದೆಗಳಿಗೆ 336 ಅರ್ಜಿಗಳು ಬಂದಿದೆ ಇದರಲ್ಲಿ 207 ಜನರ ನೇಮಕವಾಗಿದೆ. ಉಳಿದವು ಅರ್ನಹತೆಯ ಆಧಾರದಲ್ಲಿ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬೀದ್ ಗಡ್ಯಾಳ್ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!