ಮೂಡುಬಿದಿರೆ: ನೇಣುಬಿಗಿದು ಯುವಕ ಆತ್ಮಹತ್ಯೆ
ಮೂಡುಬಿದಿರೆ : ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ.
ಪಾರಿಸ್ (20) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ.
ಪಾರಿಸ್ ಮಧ್ಯಾಹ್ನ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಗೆ ಶರಣಾಗಿದ್ದಾನೆ.
ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್ ನ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




