“ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ” ಎಂದು ಡೆತ್‍ನೋಟ್ ಬರೆದಿಟ್ಟು ಇಂಜಿಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಎಂದು ಡೆತ್‍ನೋಟ್ ಬರೆದಿಟ್ಟು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ತೇಜಸ್ (22) ಆತ್ಮಹತ್ಯೆಗೆ ಶರಣಾದವ. ಯಲಹಂಕದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದು, ಕಾಲೇಜಿಗೆ ಟಾಪರ್ ಆಗಿದ್ದ.
ತೇಜಸ್ ತನ್ನ ಸ್ನೇಹಿತ ಮಹೇಶ್‍ಗಾಗಿ ಚೈನಿಸ್ ಲೋನ್ ಆಪ್ ಮೂಲಕ ಸಾಲ ಪಡೆದಿದ್ದನು. ಸ್ನೇಹಿತ ಮಹೇಶ್ ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದನು.
ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ನೀಡಿದ್ದ ಲೋನ್ ಕಂಪನಿಗಳು ವಿಪರೀತ ಟಾರ್ಚರ್ ಕೊಡುತ್ತಿದ್ದವು. ಈ ಟಾರ್ಚರ್ ತಾಳಲಾರದೆ ಮಂಗಳವಾರ ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.




