March 13, 2026

ಬೈಂದೂರು: ತಿಮಿಂಗಿಲ ವಾಂತಿ ಎಂದು ನಂಬಿಸಿ ಹಳದಿ ವಸ್ತು ಮಾರಾಟಕ್ಕೆ ಯತ್ನ: ಮೂರು ಮಂದಿ ಪೊಲೀಸರ ವಶಕ್ಕೆ

0
image_editor_output_image1763366925-1689266286408.jpg

ಬೈಂದೂರು: ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್) ಎಂದು ನಂಬಿಸಿ ಹಳದಿ ಬಣ್ಣದ ವಸ್ತುವನ್ನು ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೋಲಿಸರು ಬಂಧಿಸಿದ್ದಾರೆ.

ಜುಲೈ 12 ರಂದು ಸಂಜೆ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ಗ್ರೆಸ್ ಎಂದು ಹೇಳಿ 10 ಲಕ್ಷ ರೂಪಾಯಿ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದರು. ಶಿವಮೊಗ್ಗದ ನಿರಂಜನ್ ಎಸ್(26), ಮಿಲನ್ ಮೋನಿಶ್ ಶೆಟ್ಟಿ(27), ಪೃಥ್ವಿ ಡಾಮ್ಮಿಕ್(31) ಎನ್ನುವವರನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅವರಿಂದ ಸುಮಾರು 3 ಕೆ.ಜಿ 910 ಗ್ರಾಂ ತೂಕದ ತಿಮಿಂಗಲದ ಅಂಬರ್ಗ್ರೆಸ್ ನಂತಿರುವ ವಸ್ತುವನ್ನು ಸ್ವಾಧೀನಡಿಸಿಕೊಂಡು ಆರೋಪಿತರನ್ನು ದಸ್ತಗಿರಿ ಮಾಡಿದ್ದು ಇವರ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಸಿಕೊಂಡು ತನಿಖೆಯನ್ನು ಕೈಗೊಳ್ಳಲಾಗಿದೆ. ಈ ರೀತಿ ಮೇಣದಂತಹ ವಸ್ತುವಿಗೆ ತಿಮಿಂಗಲದ ಅಂಬರ್ಗ್ರೆಸ್ ಎಂದು ಸುಳ್ಳು ಹೇಳಿ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುವ ಜಾಲವು ಸಕ್ರಿಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರಿಂದ ಇರುವಂತೆಯೂ, ಈ ರೀತಿಯ ಯಾವುದೇ ಆಮಿಷಕ್ಕೆ ಒಳಗಾಗಬಾರದೆಂದು ಮತ್ತು ಈ ರೀತಿಯ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಹಾಕೆ ಅಕ್ಷಯ್ ಮಚೀಂದ್ರ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!