March 13, 2026

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

0
440d9c34198948f8aa8ac999ccbc85fb.jpg

ಶ್ರೀಹರಿಕೋಟಾ: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ನಭಕ್ಕೆ ಹಾರಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿದೆ,

ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌, ರೋವರ್‌ ಹೊತ್ತೊಯ್ದಿದ್ದು, ಇದರ ಒಟ್ಟು ತೂಕ 3,926 ಕೆಜಿ. ಪ್ರೊಪಲ್ಷನ್‌ ಮಾಡ್ಯೂಲ್‌ ತೂಕವು 2,148 ಕೆಜಿ, ಲ್ಯಾಂಡರ್‌ (ರೋವರ್‌ ಸಹಿತ) 1,752 ಕೆಜಿ, ರೋವರ್‌ 26 ಕೆಜಿ ತೂಕವಿದೆ. ಪ್ರೊಪಲ್ಷನ್‌ ಮಾಡ್ಯೂಲ್‌ 3 ರಿಂದ 6 ತಿಂಗಳ ಜೀವಿತಾವಧಿ ಹೊಂದಿದೆ.

ಇನ್ನು ಈ ನೌಕೆ ಚಂದ್ರನಲ್ಲಿ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದ್ದು, ಆಗಸ್ಟ್ 23 ಅಥವಾ 24ರಂದು ಚಂದ್ರನಲ್ಲಿ ಇಳಿಯಲಿದೆ.

Leave a Reply

Your email address will not be published. Required fields are marked *

error: Content is protected !!