ಸುರತ್ಕಲ್: ಮೀನು ಹಿಡಿಯುವಾಗ ನೀರಲ್ಲಿ ಮುಳುಗಿ ವ್ಯಕ್ತಿ ಸಾವು
ಸುರತ್ಕಲ್ : ಮೀನು ಹಿಡಿಯಲು ಬಂದು ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ.
ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಸುರತ್ಕಲ್ 62ನೇ ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ




