March 13, 2026

ಗೃಹ ಲಕ್ಷ್ಮೀ ಯೋಜನೆ ಜುಲೈ 19ರಿಂದ ಜಾರಿ

0
image_editor_output_image788132992-1689403083945.jpg

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯನ್ನು ಜುಲೈ 17 ಅಥವಾ 19ರಿಂದ ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸುದ್ದಿಗೋಷ್ಠಿ ನಡೆಸಿದ ಅವರು ಗೃಹ ಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಮಾಹಿತಿ ನೀಡಿದರು.

ಯೋಜನೆ ಉದ್ಘಾಟನೆಗೆ ನಮ್ಮ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆಯಲಾಗಿದ್ದು, ಅವರು ಲಭ್ಯವಾದರೆ ಜುಲೈ 17 ಸೋಮವಾರ ಸಂಜೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಉದ್ಘಾಟಿಸಲಾಗುದು.

ರಾಷ್ಟ್ರೀಯ ನಾಯಕರು ಬರದಿದ್ದಲ್ಲಿ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಾರೆ ಎಂದು ಹೇಳಿದರು.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 19ರಿಂದ ಅವಕಾಶವಿದೆ. ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.

ಗೃಹ ಜ್ಯೋತಿ ಯೋಜನೆಯಂತೆ ಈ ಯೋಜನೆಗೆ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಬೇಡಿಕೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸಲಾಗುವುದು. ಆದರೆ ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇಲ್ಲ ಎಂದು ಹೆಬ್ಬಾಳ್ಕರ್ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!