ಚಾಮರಾಜನಗರ | ಚಿರತೆ ದಾಳಿ: ಬಾಲಕಿ ಸಾವು
ಚಾಮರಾಜನಗರ: ಚಿರತೆ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಜೂನ್ 26ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಸುಶೀಲ (ಆರೂವರೆ ವರ್ಷ) ಎಂಬ ಬಾಲಕಿಯ ಮೇಲೆ ಏಕಾಏಕಿ ಚಿರತೆಯೊಂದು ದಾಳಿ ಮಾಡಿತ್ತು.
ರಾತ್ರಿ ವೇಳೆ ಬಾಲಕಿ ಮನೆಯಿಂದ ಹೊರಗೆ ಬಂದಿದ್ದ ಸಂದರ್ಭ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ಬಾಲಕಿಯ ಕತ್ತಿನ ಬಳಿ ಗಂಭೀರ ಗಾಯಗಳಾಗಿತ್ತು. ಈ ಹಿನ್ನೆಲೆ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.




