March 13, 2026

ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ ಹಿನ್ನಲೆ, ಮದ್ಯ ಮಾರಾಟಕ್ಕೆ ನಿಷೇಧ: ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಆದೇಶ
 

0
drinks.jpg

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಹಾಗೂ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಗ್ರಾಪಂ ಉಪಚುನಾವಣೆಯ ಹಿನ್ನಲೆ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಗ್ರಾಪಂ ಉಪಚುನಾವಣೆಯ ಹಿನ್ನಲೆ, ಜುಲೈ 21ರ ಸಂಜೆ 5 ಗಂಟೆಯಿಂದ ಜುಲೈ 23ರ ಸಂಜೆ 5 ಗಂಟೆಯವರಿಗೆ ಆಯಾ ಗ್ರಾಪಂಗಳ ಕ್ಷೇತ್ರ ವ್ಯಾಪ್ತಿಯಲ್ಲಿ ಒಣದಿನ (ಡ್ರೈಡೇ) ಗಳೆಂದು ಘೋಷಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!