March 13, 2026

ಆಸ್ತಿ ವಿವಾದಕ್ಕೆ ಸಹೋದರರಿಂದ ಸಂಪ್ಯದ ಉಸ್ಮಾನ್ ಕೊಲೆ ಪ್ರಕರಣ: ಆರೋಪಿಗಳು ಕೇರಳದಲ್ಲಿ ಪೊಲೀಸರ ವಶಕ್ಕೆ

0
IMG-20230716-WA0012.jpg

ಕೊಡಗು: ಆಸ್ತಿ ವಿವಾದಕ್ಕೆ ಸಂಬಂಧಿಸಿ ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಉಸ್ಮಾನ್‌ರ ಸಹೋದರರಾದ ರಫೀಕ್ ಮತ್ತು ಸತ್ತಾರ್ ಬಂಧಿತ ಆರೋಪಿಗಳು.

ಆಸ್ತಿ ವಿವಾದಕ್ಕೆ ಸಂಬಂಧಿಸಿ ಅಣ್ಣ ಉಸ್ಮಾನ್‌ರನ್ನು ಚೂರಿಯಿಂದ ಇರಿದು ಜು. 14ರಂದು ಕೊಲೆ ಮಾಡಿ ಬಳಿಕ ಅವರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು.

ಇನ್ನು ಆರೋಪಿಗಳನ್ನು ಕೊಡಗು ಪೊಲೀಸರು ಶನಿವಾರ ರಾತ್ರಿ ಕೇರಳದಲ್ಲಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!