March 13, 2026

ಸ್ಪೀಕರ್ ಯು.ಟಿ. ಖಾದರ್ ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ

0
IMG-20230716-WA0020.jpg

ನವದೆಹಲಿ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‌ ಇಂಡಿಯನ್‌ ಕಾನ್ಫರೆನ್ಸ್‌ ಆಫ್‌ ಇಂಟಲೆಕ್ಚುವಲ್ಸ್‌ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಜು.16ರ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಒಡಿಶಾ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಮತ್ತು ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದ ರಾಷ್ಟ್ರೀಯ ಅಧ್ಯಕ್ಷರು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು

ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್,ಮುಖ್ಯ ಅತಿಥಿಯಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಭಾಗವಹಿಸಿದ್ದರು.

ಇದೇ ವೇಳೆ ಬಿಸ್ವ ಭೂಷಣ ಹರಿಚರಣ್ ಆತ್ಮಚರಿತ್ರೆಯ ಇಂಗ್ಲಿಷ್ ಅನುವಾದ ‘ಬ್ಯಾಟಲ್ ನಾಟ್ ಓವರ್’ ಸಹ ಇದೇ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

Leave a Reply

Your email address will not be published. Required fields are marked *

error: Content is protected !!