March 13, 2026

ಉಡುಪಿ | ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ: ಇಬ್ಬರು ಗಂಭೀರ

0
image_editor_output_image-382353355-1689574430738.jpg

ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಟೈಗರ್ ಸರ್ಕಲ್ ಬಳಿ ನಡೆದಿದೆ.

ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್ ಪರ್ಕಳ ಕಡೆ ಹೋಗುತ್ತಿದ್ದ ಟಿವಿಎಸ್ ಮೊಪೆಡ್‌ಗೆ ಟೈಗರ್ ಸರ್ಕಲ್ ಬಳಿ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಅಂಜಾರುವ ಕಾಜಾರಗುತ್ತು ನಿವಾಸಿ ರಮೇಶ ಪ್ರಭು (69) ಹಾಗೂ ಸಹಸವಾರೆ ಅವರ ಮಗಳು ಶ್ರೀದೇವಿ ಪ್ರಭು(42) ಗಾಯಗೊಂಡವರು. ಗಾಯಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!