September 19, 2024

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಮಂಗಳೂರು : ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಗರದ ಕಣ್ಣೂರಿನ ಅಡ್ಯಾರ್ ಸಮೀಪದ ಜುಮ್ಮಾ ಮಸೀದಿ ಬಳಿಯ ನಿವಾಸಿ 35 ವರ್ಷದ ಸೈಯದ್ ಹಸೈನಾರ್ ಯಾನೆ ಹಸೈನ್ ಬಂಧಿತ ಆರೋಪಿಯಾಗಿದ್ದಾನೆ.

ಈತನ ವಿರುದ್ಧ ಹಲ್ಲೆ ಮತ್ತು ಅಕ್ರಮ ಪ್ರವೇಶದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ 18.10.2014 ರಲ್ಲಿ ಮಂಗಳೂರಿನ JMFC 3 ನೇ ನ್ಯಾಯಾಲಯವು 4 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಮತ್ತು 1,500 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿತ್ತು.

ಆದ್ರೆ ಆರೋಪಿ ಹಸೈನಾರ್ ಪೊಲೀಸರೆ ಕೈಗೆ ಸಿಗದೇ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಶನಿವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!