March 13, 2026

ವಿರೋಧ ಪಕ್ಷಗಳ ಮಹಾಮೈತ್ರಿಕೂಟದ ಸಭೆ: ಬೇರೆ ರಾಜ್ಯದ ರಾಜಕೀಯ ಮುಖಂಡರನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

0
IMG-20230717-WA0037.jpg

ಬೆಂಗಳೂರು: ಎರಡು ದಿನಗಳ ಕಾಲ ನಡೆಯಲಿರುವ ವಿರೋಧ ಪಕ್ಷಗಳ ನಾಯಕರ ಸಮಾವೇಷಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾನಾ ಪಕ್ಷಗಳ ಮುಖಂಡರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣಕೂಟಕ್ಕೆ ಸ್ವಾಗತಿಸಿದ್ದಾರೆ.

ಬೆಂಗಳೂರಿನ ತಾಜ್​ವೆಸ್ಟ್​ ಎಂಡ್ ಹೋಟೆಲ್​ನಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿಕೂಟದ ಸಭೆಯ ಔತಣಕೂಟ ನಡೆದಿದ್ದು, ಸಭೆ, ಔತಣಕೂಟ ಮುಗಿಸಿ ಹೋಟೆಲ್‌ನಿಂದ ಎಐಸಿಸಿ ಅಧ್ಯಕ್ಷ ಖರ್ಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವರು ಕೂಡ ತೆರಳಿದ್ದಾರೆ.

ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾಮೈತ್ರಿಕೂಟದ ಸಭೆ ವಿಚಾರವಾಗಿ ಇಂದು ಕೇವಲ ಪ್ರಾಸ್ತಾವಿಕವಾಗಿ ಚರ್ಚಿಸಿದ್ದು, ನಾಳೆಯ ಅಜೆಂಡಾ ಕುರಿತು ಮಲ್ಲಿಕಾರ್ಜುನ ಖರ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!