March 13, 2026

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

0
download.jpeg

ಕೇರಳ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. ಅಪ್ಪಾ ನಿಧನರಾಗಿದ್ದಾರೆ ಎಂದು ಚಾಂಡಿ ಅವರ ಪುತ್ರ ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಾಂಡಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿತ್ತು.

ಉಮ್ಮನ್ ಚಾಂಡಿ, ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿದ್ದರು. 2004ರಿಂದ 2006ರವರೆಗೆ ಮೊದಲ ಬಾರಿ ಸಿಎಂ ಆಗಿದ್ದರು. ಬಳಿಕ 2011ರಿಂದ 2016ರ ವರೆಗೆ ಎರಡನೇ ಬಾರಿಗೆ ಅಧಿಕಾರ ನಡೆಸಿದ್ದರು.

Leave a Reply

Your email address will not be published. Required fields are marked *

error: Content is protected !!