ಉಡುಪಿ: ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಉಡುಪಿ: ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಮೃತದೇಹವು ಮಣಿಪಾಲದ ನರಸಿಂಗೆ ದೇವಸ್ಥಾನದ ಬಳಿ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೊಚ್ಚಿನ್, ಕಾರವಾರದ ಕಸ್ಟಮ್ಸ್‌ನಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿದ್ದ ಪೆರ್ಡೂರು ಗೋಪಾಲ್ ನಾಯಕ್(83) ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೃತರು ದಶರಥ ನಗರದ ನರಸಿಂಗೆ ದೇವಸ್ಥಾನದ ಬಳಿ ಒಬ್ಬಂಟಿಯಾಗಿ ವಾಸವಾಗಿದ್ದರು.
ಮಣಿಪಾಲ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು.
ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.
ಈ ಪ್ರಕರಣ ಮಣಿಪಾಲದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.




