February 4, 2026

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌‌ಗೆ ಮಧ್ಯಂತರ ಜಾಮೀನು ಮಂಜೂರು

0
hr-180723-bridge.jpg

ನವದೆಹಲಿ : ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್‌ಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಎರಡು ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಮುಂದಿನ ವಿಚಾರಣೆ ಜುಲೈ 20 ರಂದು ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ.

ಇನ್ನು ದೆಹಲಿ ಪೊಲೀಸರು ಜೂನ್ 15 ರಂದು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಬ್ರಿಜ್ ಭೂಷಣ್ ಅವರಲ್ಲದೆ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೆಸರೂ ಸೇರಿಸಿ ಮಹಿಳಾ ಕುಸ್ತಿಪಟುಗಳು ಇಬ್ಬರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.”

Leave a Reply

Your email address will not be published. Required fields are marked *

error: Content is protected !!