March 24, 2026

ಗೃಹಲಕ್ಷ್ಮಿ ಯೋಜನೆಯ ನಕಲಿ ಅರ್ಜಿ ಹರಿದಾಡುತ್ತಿದೆ: ಸರ್ಕಾರದಿಂದ ಅರ್ಜಿ ಫಾರ್ಮ್ ಬಿಡುಗಡೆ ಮಾಡಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

0
file70vq4gj2e0o4lsnn6g3.jpg

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ನಕಲಿ ಅರ್ಜಿಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

Leave a Reply

Your email address will not be published. Required fields are marked *

error: Content is protected !!