March 24, 2026

26 ಪಕ್ಷಗಳ ಮಹಾಮೈತ್ರಿಕೂಟಕ್ಕೆ “INDIA” ನಾಮಕಾರಣ: ಬಿಜೆಪಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿರುವ ಪ್ರತಿಪಕ್ಷ
 

0
hr-180723-india.jpg


ಬೆಂಗಳೂರು: 2023ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಹಾಗೂ ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸುವ ಉದ್ದೇಶದಿಂದ ಬೆಂಗಳೂರಿನ ಹೋಟೆಲ್‌ನಲ್ಲಿ ವಿಪಕ್ಷಗಳ ಮೈತ್ರಿಕೂಟದ ಸಭೆ ನಡೆಸಲಾಯಿತು. 26 ಪಕ್ಷಗಳ ಮೈತ್ರಿಕೂಟಕ್ಕೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (INDIA) ಎಂದು ಹೆಸರಿಡಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಸಭೆಗೆ ಬಂದಿರುವುದು ನನಗೆ ಗೌರವ ತಂದಿದೆ. ಭಾರತದ ಕಲ್ಪನೆಯ ಮೇಲೆ ದಾಳಿ ನಡೆಯುತ್ತಿದೆ. ಕೋಟ್ಯಂತರ ಭಾರತೀಯರಿಂದ ಭಾರತದ ಧ್ವನಿಯನ್ನು ಕಿತ್ತುಕೊಂಡು ನರೇಂದ್ರ ಮೋದಿಯವರ ಆಪ್ತರಾಗಿರುವ ಕೆಲವೇ ಉದ್ಯಮಿಗಳಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಇದು ಭಾರತದ ಧ್ವನಿಗಾಗಿ ಹೋರಾಟವಾಗಿದೆ. ಅದಕ್ಕಾಗಿಯೇ ನಾವು ಈ ಹೆಸರನ್ನು ಆರಿಸಿದ್ದೇವೆ ಎಂದರು.

ವಿಪಕ್ಷದ ಮುಖಂಡರು ಮಾತನಾಡಿ, ತಮ್ಮ ಮೈತ್ರಿಕೂಟಕ್ಕೆ ಇಂಡಿಯಾ ಹೆಸರನ್ನು ಘೋಷಿಸಿದ್ದೇವೆ. ಈ ಬಗ್ಗೆ ಸಭೆಯಲ್ಲಿ 26 ರಾಷ್ಟ್ರೀಯ ವಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯಾ ಎಂದು ಹೆಸರಿಡುವ ಪ್ರಸ್ತಾಪವನ್ನು ರಾಹುಲ್ ಗಾಂಧಿ ಅವರು ಮುಂದಿಡಲಾಯಿತು ಎಂದರು.

ಸಭೆಯಲ್ಲಿ ಮೈತ್ರಿಕೂಟದ ನಾಯಕತ್ವದ ಬಗ್ಗೆಯೂ ಮಾತುಕತೆ ನಡೆದಿದೆ. ಸೋನಿಯಾ ಗಾಂಧಿ, ಶರತ್ ಪವಾರ್, ನಿತೀಶ್ ಕುಮಾರ್ ಹೆಸರು ಚರ್ಚೆಯಲ್ಲಿ ಇದೆ. ಅಂತಿಮವಾಗಿ ಮೂರ್ನಾಲ್ಕು ಸುತ್ತಿನ ಸಭೆಯ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇಂದು ಮಹಾಘಟಬಂಧನ ಮೈತ್ರಿಕೂಟದ ಹೆಸರಿನ ಬಗ್ಗೆ ಚರ್ಚೆಯಾಗಿತ್ತು. ಅಲ್ಲದೇ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದರು.”

Leave a Reply

Your email address will not be published. Required fields are marked *

error: Content is protected !!