August 12, 2026

ಉಡುಪಿ| ಕಾರ್ಮಿಕರ ಮಧ್ಯೆ ಹೊಡೆದಾಟ: ಓರ್ವನ ಕೊಲೆಯಲ್ಲಿ ಅಂತ್ಯ

0
image_editor_output_image-402111255-1689743242289.jpg

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆಗೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ನಿನ್ನೆ ಕಟಪಾಡಿ ಪೇಟೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್ ನಲ್ಲಿ ಒಡಿಶಾ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದು ಯಾವುದೋ ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿದ್ದ 10 -15 ಕಾರ್ಮಿಕರು ಪಲಾಯನ ಮಾಡಿದ್ದಾರೆ.

ಈ ವೇಳೆ ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಉಡುಪಿ ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಮದ್ಯಪಾನ ನಡೆಸಿದ್ದ ಜೊತೆಗೆ ಹೊಡೆದಾಟದಲ್ಲಿ ಈತನಿಗೂ ಗಾಯವಾಗಿತ್ತು. ಈ ಹಿನ್ನೆಲೆ ಪೊಲೀಸರು ಶಂಕಿತ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಉಡುಪಿ ಎಸ್‌ಪಿ ಹಾಕೇ ಅಕ್ಷಯ್ ಮಚ್ಚಿಂದ್ರ ಮತ್ತು ಡಿವೈಎಸ್‌ಪಿ, ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!