February 3, 2026

ಪಡೀಲ್ ಬಳಿ ಬೈಕ್ ಅಪಘಾತ: ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಮೃತ್ಯು

0
image_editor_output_image-126991216-1689756182381.jpg

ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕೇರಳ ಮೂಲದ ಮುಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ, ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಯಾಗಿದ್ದಾನೆ.

ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!